Bengaluru 2nd Airport: 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಈ ಎರಡು ಸ್ಥಳಗಳು ಗುರುತು.. ಎಲ್ಲಿ ಗೊತ್ತಾ?

Bengaluru 2nd Airport : ಬೆಂಗಳೂರು (Bengaluru) ಸಿಲಿಕಾನ್ ಸಿಟಿಯಾಗಿದ್ದು, ಐಟಿ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿದೆ. ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಓಡಾಟ ನಡೆಸುವ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ. ಸದ್ಯ, ನಗರಕ್ಕೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ರಾಜ್ಯ ಸರ್ಕಾರ ಕೂಡ ಕಾರ್ಯಪೃವೃತವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Bengaluru 2nd Airport

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ (Bengaluru 2nd International Airport) ಎರಡು ಸ್ಥಳಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B.Patil) ಅವರು ಶನಿವಾರ ಹೇಳಿದ್ದಾರೆ.

ನೂತನ ವಿಮಾನ ನಿಲ್ದಾಣಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಇವೆರೆಡು ಜಾಗಗಳು ನಗರದಿಂದ ಸರಿ ಸುಮಾರು 50 ಕಿಲೋಮೀಟರ್ ಅಂತರದಲ್ಲಿವೆ. ನೆಲಮಂಗಲ ಹಾಗೂ ಹಾಸನ ಹೆದ್ದಾರಿ ಜಂಕ್ಷನ್‌ನಿಂದ 10 ಕಿಲೋಮೀಟರ್ ದೂರದಲ್ಲಿ ಒಂದು ಸ್ಥಳವನ್ನು ಗುರುತಿಸಲಾಗಿದೆ. ಮತ್ತೊಂದು ಸ್ಥಳ ಕನಕಪುರ ರಸ್ತೆ ಮತ್ತು ನೈಸ್ ರಸ್ತೆ ಜಂಕ್ಷನ್‌ನಿಂದ 10 ಕಿಲೋಮೀಟರ್ ದೂರದಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

Bengaluru 2nd Airport
Bengaluru 2nd Airport

ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಗುರುತಿಸಲಾಗಿರುವ ಎರಡು ಸ್ಥಳಗಳು ಬೆಂಗಳೂರು ಮಹಾನಗರಿಯನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಿಗೂ ಹೊಂದಿಕೊಂಡಿವೆ. ಇದು ಮಾತ್ರವಲ್ಲದೆ, ಈ ಜಾಗಗಳಿಂದ ಕೊನೆಯ ಮೆಟ್ರೋ ಟರ್ಮಿನಲ್ ನಿಲ್ದಾಣಗಳು ಸಹ ಕೆಲವೇ ಕಿಲೋಮೀಟರ್ ದೂರದಲ್ಲಿವೆ ಎಂದು ಎಂ.ಬಿ.ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ಹೊಸ ವಿಮಾನ ನಿಲ್ದಾಣಕ್ಕಾಗಿ ಆಯ್ಕೆ ಮಾಡಿರುವ ಜಾಗದ ವಿವರಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ಸಲ್ಲಿಸಲಾಗಿದೆ. ಪ್ರಾಧಿಕಾರದ ಅಧಿಕಾರಿಗಳು ಪರಿಶೀಲನೆ ನಡೆಸಿ, ಒಪ್ಪಿಗೆಯನ್ನು ನೀಡಲಿದ್ದಾರೆ. ಆ ಬಳಿಕ, ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗುತ್ತದೆ. ಅದರ ವರದಿ ಆಧರಿಸಿ, ಎರಡನೇ ವಿಮಾನ ನಿಲ್ದಾಣಕ್ಕೆ ಅಂತಿಮ ಸ್ಥಳ ಯಾವುದೆಂದು ನಿರ್ಧಾರ ಮಾಡಲಾಗುತ್ತದೆ’ ಎಂದು ಸಚಿವರು ಹೇಳಿದ್ದಾರೆ.

Bengaluru 2nd Airport
Bengaluru 2nd Airport

ಇತ್ತೀಚೆಗೆ ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಸಭೆಯಲ್ಲಿ ಕೇಳಿದ್ದರು. ಅದಕ್ಕೆ ಉತ್ತರಿಸಿದ್ದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು, ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮತಿ ಕೋರಿ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ, ಅದನ್ನು ಅನುಮೋದಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾದರೆ, ದೇಶ ಹಾಗೂ ವಿದೇಶದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಎರಡು ವಿಮಾನ ನಿಲ್ದಾಣಗಳು ಒಂದೇ ನಗರದಲ್ಲಿದ್ದರೆ ಸಂಚಾರ ದಟ್ಟಣೆ ಸಮಸ್ಯೆಯೂ ದೂರವಾಗಲಿದ್ದು, ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದು ಮಾತ್ರವಲ್ಲದೆ ಶೈಕ್ಷಣಿಕ – ಚಟುವಟಿಕೆಗಳು, ಪ್ರವಾಸೋದ್ಯಮ ಹಾಗೂ ವ್ಯಾಪಾರ ವಾಣಿಜೋದ್ಯಮಗಳು ಕೂಡ ವೃದ್ಧಿಯಾಗಲಿವೆ.

Krishn Guru

Content Creator | Graphic Designer | UI/UX Designer | Newbie Programmer | Web Developer & Designer | Blogger & Editor | YouTuber | Gamer | Let's connect, create, and innovate together! ✨

Join WhatsApp

Join Now

Join Telegram

Join Now

Leave a Comment