KCET Results 2025: ನಾಳೆ ಸಿಇಟಿ 2025 ಫಲಿತಾಂಶ ಪ್ರಕಟ; ವೀಕ್ಷಣೆ ವೆಬ್‌ಸೈಟ್‌ಗಳು, ಸಮಯದ ವಿವರ ಇಲ್ಲಿದೆ.

Join WhatsApp

Join Now
KCET

Join Telegram

Join Now

KCET Results 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಯುಜಿಸಿಇಟಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಮೇ 24) ಅಧಿಕೃತವಾಗಿ ಪ್ರಕಟಿಸಲಿದೆ. ಹಾಗಾದ್ರೆ ಫಲಿತಾಂಶ ವೀಕ್ಷಣೆ ವೆಬ್‌ಸೈಟ್‌ಗಳು, ಸಮಯದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

KCET Result

ಶನಿವಾರ ಬೆಳಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಯ ಬಳಿಕ ಇಲಾಖೆಯ ಅಧಿಕೃತ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯ ಆಗಲಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯಿಂದ ಕೆಇಎನ ಅಧಿಕೃತ ವೆಬ್‌ಸೈಟ್‌ಗಳಾದ https://cetonline.karnataka.gov.in/ugcetrank2025/checkresult.aspx ಹಾಗೂ https://karresults.nic.inನಲ್ಲಿ ವೀಕ್ಷಣೆ ಮಾಡಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿಕೊಂಡು ಫಲಿತಾಂಶ ವೀಕ್ಷಣೆ ಮಾಡಬಹುದು.

ಫಲಿತಾಂಶದಲ್ಲಿ ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ಪರೀಕ್ಷೆಯಲ್ಲಿ ಪಡೆದ ರ‍್ಯಾಂಕ್‌ನ ವಿವರಗಳು ಇರುತ್ತವೆ. ಫಲಿತಾಂಶದ ಜೊತೆಗೆ ಸರಿಯಾದ ಕೀ ಉತ್ತರ ಮತ್ತು ಫಲಿತಾಂಶವನ್ನು ತಡೆಹಿಡಿಯಲಾದ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.

2025ರ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 15, 16 ಮತ್ತು 17ರಂದು ನಡೆಸಲಾಗಿತ್ತು.

ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 25, 2025ರಂದು ಘೋಷಣೆ ಮಾಡಲಾಗಿತ್ತು. ಈ ಪರೀಕ್ಷೆಯು ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸುತ್ತದೆ. ಫಲಿತಾಂಶದ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳು ಕೆಇಎ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಕೌನ್ಸೆಲಿಂಗ್ ಪ್ರಕ್ರಿಯೆಯು ಆನ್‌ಲೈನ್ ನೋಂದಣಿ, ದಾಖಲೆ ಪರಿಶೀಲನೆ, ಕಾಲೇಜು ಆಯ್ಕೆ ಮತ್ತು ಸೀಟು ಹಂಚಿಕೆಯನ್ನು ಒಳಗೊಂಡಿರುತ್ತದೆ.

Join WhatsApp

Join Now

Leave a Comment