12 ವರ್ಷಗಳ ಪರಂಪರೆ… ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುವ ಭೀತಿ – Kannada News | Ipl 2025: Mumbai Indians havent won their first game of the season from last 12 years

IPL 2025

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು (ಮಾ.23) ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಸಂಜೆ ಜರುಗಲಿರುವ ಮೊದಲ ಮ್ಯಾಚ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಕಣಕ್ಕಿಳಿಯಲಿವೆ.

ರಾತ್ರಿ 7.30 ರಿಂದ ಶುರುವಾಗಲಿರುವ ಈ ಎಲ್​ ಕ್ಲಾಸಿಕೊ ಪಂದ್ಯವು ಇದೀಗ ಎಲ್ಲರ ಕೇಂದ್ರ ಬಿಂದು. ಏಕೆಂದರೆ ಐಪಿಎಲ್​ನ ಎರಡು ಬಲಿಷ್ಠ ತಂಡಗಳ ಮುಖಾಮುಖಿಯಲ್ಲಿ ಶುಭಾರಂಭ ಮಾಡುವವರು ಯಾರು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

Table of Contents

IPL 2025 : 12 ವರ್ಷಗಳಿಂದ ಗೆಲ್ಲದ ಮುಂಬೈ ಇಂಡಿಯನ್ಸ್:

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಶುಭಾರಂಭ ಮಾಡುವ ವಿಷಯದಲ್ಲಿ ಮುಂಬೈ ಪಡೆ ಕಳೆದ 13 ವರ್ಷಗಳಿಂದ ಹಿಂದೆ ಉಳಿದಿದೆ. ಇದಕ್ಕೆ ಸಾಕ್ಷಿ ಕಳೆದ ಹದಿಮೂರು ವರ್ಷಗಳಲ್ಲಿ ಆರಂಭಿಕ ಪಂದ್ಯಗಳಲ್ಲಿ ಸೋತಿರುವುದು.

ಅಂದರೆ ಮುಂಬೈ ಇಂಡಿಯನ್ಸ್ ಪಡೆಯು ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಗೆದ್ದು 13 ವರ್ಷಗಳೇ ಕಳೆದಿವೆ. 2012 ರ ಬಳಿಕ ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಒಮ್ಮೆಯೂ ಜಯ ಸಾಧಿಸಿಲ್ಲ.

2012 ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿತ್ತು. ಈ ಗೆಲುವಿನ ಬಳಿಕ ಮುಂಬೈ ಇಂಡಿಯನ್ಸ್ ಪಾಲಿಗೆ ಶುಭಾರಂಭ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

2013 ರಿಂದ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಕಳೆದ 11 ವರ್ಷಗಳಲ್ಲಿ ಹಿಟ್​ಮ್ಯಾನ್ ಸಾರಥ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯ ಗೆದ್ದಿರಲಿಲ್ಲ.

2024 ರಲ್ಲಿ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಪರಾಜಯಗೊಂಡಿತ್ತು. ಆದರೆ ಈ ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ತನ್ನ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಕಳೆದ ಸೀಸನ್​ನ ಕೊನೆಯ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಒಂದು ಪಂದ್ಯದ ನಿಷೇಧ ಹೇರಲಾಗಿದ್ದು, ಹೀಗಾಗಿ ಇಂದು ನಡೆಯಲಿರುವ ಸಿಎಸ್​ಕೆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇತ್ತ 12 ವರ್ಷಗಳಿಂದ ಮುಂಬೈ ಇಂಡಿಯನ್ಸ್ ಪಾಲಿಗೆ ಮರೀಚಿಕೆಯಾಗಿರುವ ಶುಭಾರಂಭವು ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ದಕ್ಕಲಿದೆಯಾ ಎಂಬುದೇ ಪ್ರಶ್ನೆ. ಆದರೆ ದಕ್ಕುವುದಿದ್ದರೂ ಅದು ಅಂದುಕೊಂಡಷ್ಟು ಸುಲಭದಲ್ಲಿ ದಕ್ಕುವುದಿಲ್ಲ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಆಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡ ತವರು ಮೈದಾನ ಚೆಪಾಕ್ ಸ್ಟೇಡಿಯಂನಲ್ಲಿ.

ಹೀಗಾಗಿ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಎಲ್​ ಕ್ಲಾಸಿಕೊ ಪಂದ್ಯದಲ್ಲಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ವಿಜಯ್ ಶಂಕರ್, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಸ್ಯಾಮ್ ಕರನ್, ರವಿಚಂದ್ರನ್ ಅಶ್ವಿನ್, ಮಥೀಶ ಪತಿರಾಣ, ಕಮಲೇಶ್ ನಾಗರಕೋಟಿ, ನಾಥನ್ ಎಲ್ಲಿಸ್, ಮುಖೇಶ್ ಚೌಧರಿ, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಶ್ರೇಯಸ್ ಗೋಪಾಲ್, ನೂರ್ ಅಹ್ಮದ್, ಗುರ್ಜಪ್ನೀತ್ ಸಿಂಗ್, ರಾಮಕೃಷ್ಣ ಘೋಷ್, ಆಂಡ್ರೆ ಸಿದ್ದಾರ್ಥ್ ಸಿ, ವಂಶ್ ಬೇಡಿ, ಜೇಮಿ ಓವರ್ಟನ್.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾಡಾವ್ (ಪೆಲ್ಲೊ), ತಿಲಕ್ ವರ್ಮಾ, ರೆಯೆರ್, ರಯಾನ್ ರಿಕೆಲ್ಟನ್, ರಾಬಿನ್ ಮಿನ್ಜ್. ಬೌಲ್ಟ್, ಅರ್ಜುನ್ ತೆಂಡೂಲ್ಕರ್, ಬೆವನ್ ಜಾಕಬ್ಸ್, ಅಶ್ವಾನಿ ಕುಮಾರ್, ರೀಸ್ ಟಾಪ್ಲಿ, ಕಾರ್ನ್ ಶರ್ಮಾ, ಸತ್ಯನಾರಾಯಣ ರಾಜು, ವಿಘಾನೇಶ್ ಪುಟ್ಟೂರ್, ಹಾರ್ದಿಕ್ ಪಾಂಡ್ಯ.

Join WhatsApp

Join Now

Leave a Comment